|| ಕೇದಾರೇಶ್ವರ ಚಾಲುಕ್ಯ ಮತ್ತು ಹೊಯ್ಸಳರ ಪುರತತ್ವ ದೇವಾಲಯ ಬಳ್ಳಿಗಾವೆ ||

Поділитися
Вставка
  • Опубліковано 2 лис 2024
  • ಬಳ್ಳಿಗಾವೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿರುವ ಒಂದು ಐತಿಹಾಸಿಕ ಸ್ಥಳ. ದಕ್ಷಿಣದ ಕೇದಾರನಾಥವೆಂದು ಕರೆಯಲ್ಪಡುತ್ತದೆ. ಶಿಕಾರಿಪುರ ಪಟ್ಟಣದಿಂದ ಸುಮಾರು ೨೧ ಕಿ.ಮೀ ದೂರವಿರುವ ಈ ಪುಟ್ಟ ಹಳ್ಳಿ ಆಲ್ಲಮಪ್ರಭುಗಳ ಜನ್ಮಸ್ಥಳವೂ ಹೌದು. ಹೊಯ್ಸಳರ ವಿಷ್ಣುವರ್ಧನನ ರಾಣಿ ಶಾಂತಲಾದೇವಿಯ ತವರುಮನೆ. ಹೊಯ್ಸಳ ಶೈಲಿಯ ಕೇದಾರೆಶ್ವರ ದೇವಾಲಯದ ನಿರ್ಮಾಣ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಪ್ರಾರಂಭವಾಗಿ ಹೊಯ್ಸಳರ ಕಾಲದಲ್ಲಿ ಪೂರ್ಣಗೊಂಡಿತು. ಬಳ್ಳಿಗಾವೆ ಕಲ್ಯಾಣಿ ಚಾಲುಕ್ಯರ ದಕ್ಷಿಣ ಭಾಗದ ನಾಡಿನ ರಾಜಧಾನಿಯಾಗಿತ್ತು. ಶಿರಾಳಕೊಪ್ಪದಿಂದ ೩ ಕಿಮಿ ದೂರ ಇರುವ ಈ ಪುಟ್ಟ ಊರು ಚಾಲುಕ್ಯ ಮತ್ತು ಹೊಯ್ಸಳ ಕಾಲದ ಹಲವು ದೇವಾಲಯಗಳನ್ನು ಹೊಂದಿದೆ. ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು. ಸುಖನಾಸಿಯ ನಂತರ ೪೪ ಕಂಬಗಳ ನವರಂಗ. ನಂತರ ಅಂತರಾಳ ಮತ್ತು ಪ್ರಮುಖ ಗರ್ಭಗುಡಿ. ಗರ್ಭಗುಡಿಯಲ್ಲಿ ಕೇದಾರೇಶ್ವರ ಲಿಂಗ. ಎಡಕ್ಕಿರುವ ಗರ್ಭಗುಡಿಯಲ್ಲಿ ವಿಷ್ಣುವಿನ ವಿಗ್ರಹ ಮತ್ತು ಬಲಕ್ಕಿರುವ ಗರ್ಭಗುಡಿಯಲ್ಲಿ ಬ್ರಹ್ಮೇಶ್ವರ ಲಿಂಗವಿದೆ. ನವರಂಗದಲ್ಲಿ ೨೫ಕ್ಕೂ ಅಧಿಕ ಚಾಲುಕ್ಯ ಶೈಲಿಯ ಪ್ರತಿಬಿಂಬ ನೇರವಾಗಿಯೂ ತಲೆಕೆಳಗಾಗಿಯೂ ಕಾಣುವ ಕಂಬಗಳು. ಒತ್ತೊತ್ತಾಗಿ ನಿಲ್ಲಿಸಲಾಗಿರುವ ಈ ಕಂಬಗಳ ಸಮೂಹವನ್ನು ನೋಡುವುದೇ ಚಂದ. ಈ ದೇವಾಲಯವು ಪ್ರಸಿದ್ಧ ಶಿಕ್ಷಣ ಕೇಂದ್ರವಾಗಿತ್ತು.
    ಕೇದಾರೇಶ್ವರ ದೇವಾಲಯದ ಪಕ್ಕದಲ್ಲಿರುವುದೇ ಅಲ್ಲಮ ಪ್ರಭು ದೇವಾಲಯ. ಬಳ್ಳಿಗಾವೆ ಅಲ್ಲಮ ಪ್ರಭು ಜನಿಸಿದ ಸ್ಥಳ. ಈ ಗುಡಿಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದ್ದರೂ, ಪ್ರಖ್ಯಾತ ವಚನಕಾರ ಅಲ್ಲಮ ಪ್ರಭು ತನ್ನ ಹೆಚ್ಚಿನ ಸಮಯವನ್ನು ಇದೇ ಗುಡಿಯಲ್ಲಿ ಕಳೆಯುತ್ತಿದ್ದರಿಂದ ಆತನ ಹೆಸರಿಂದಲೇ ಈ ಗುಡಿಯನ್ನು ಗುರುತಿಸಲಾಗುತ್ತದೆ. ಅಲ್ಲಮ ಪ್ರಭು ದೇವಾಲಯ ಎಂದು ಕರೆಯುವ ಮೊದಲು, ಗೋಪುರರಹಿತ ತ್ರಿಕೂಟಾಚಲ ರಚನೆಯುಳ್ಳ ಈ ದೇವಾಲಯವನ್ನು ನಗರೇಶ್ವರ ದೇವಾಲಯವೆಂದು ಕರೆಯಲಾಗುತ್ತಿತ್ತು ಮತ್ತು ಬಳ್ಳಿಗಾವೆಯ ಮೂಲ ದೇವಸ್ಥಾನವೂ ಇದೇ. ಪಟ್ಟದಕಲ್ಲಿನ ವ್ಯಾಪಾರಿ ಸಮುದಾಯದವರಾದ ವೀರ ಬಣಂಜರು ೧೨ನೇ ಶತಮಾನದಲ್ಲಿ ನಗರೇಶ್ವರ ದೇವಾಲಯವನ್ನು ನಿರ್ಮಿಸಿದರು ಎಂದು ಶಾಸನಗಳು ತಿಳಿಸುತ್ತವೆ. ಪುಟ್ಟದಾಗಿರುವ ಈ ದೇಗುಲ ಮುಖಮಂಟಪ, ನವರಂಗ ಮತ್ತು ೩ ಗರ್ಭಗುಡಿಗಳನ್ನು ಹೊಂದಿದೆ. ಬಳ್ಳಿಗಾವೆ ಊರಿನ ಮಧ್ಯದಲ್ಲಿರುವುದು ತ್ರಿಪುರಾಂತಕೇಶ್ವರ ದೇವಾಲಯ. ಹೊರಗಿನಿಂದ ನೋಡಿದರೆ ಏನೂ ವಿಶೇಷವಿಲ್ಲದಂತೆ ತೋರುವ ಈ ದೇವಸ್ಥಾನ ಒಳಹೊಕ್ಕರೆ ವಿಸ್ಮಯಗಳ ರಾಶಿಯನ್ನೇ ಕಣ್ಣೆದುರಿಗೆ ಇಡುತ್ತದೆ. ಸಂಪೂರ್ಣವಾಗಿ ಕುಸಿದಿದ್ದ ಈ ದೇವಸ್ಥಾನವನ್ನು ಭಾರತೀಯ ಪುರಾತತ್ವ ಇಲಾಖೆ ಮೂಲ ರಚನೆಗೆ ತಕ್ಕಂತೆ ಪುನ: ನಿರ್ಮಿಸಿದೆ. ಹಾಗಿದ್ದರೂ ದೇವಾಲಯ ಕುಸಿದು ಬಿದ್ದಿರುವಂತೆಯೇ ತೋರುತ್ತದೆ. ಹಾಗೆಂದುಕೊಂಡೇ ದೇವಾಲಯದ ಸಮೀಪ ತೆರಳಿದ ನಮಗೆ, ಸಂಪೂರ್ಣವಾಗಿ ಕುಸಿದಿದ್ದನ್ನು ಈ ಮಟ್ಟಕ್ಕೆ ಪುನ: ನಿರ್ಮಿಸಲಾಗಿದೆ ಎಂದು ಅಲ್ಲಿನ ಉದ್ಯೋಗಿ ತಿಳಿಸಿದರು.
    ತ್ರಿಪುರಾಂತಕೇಶ್ವರ ದೇವಾಲಯವನ್ನು ಇಸವಿ ೧೦೩೯ರಲ್ಲಿ ನಿರ್ಮಿಸಲಾಗಿತ್ತು. ಹೊಯ್ಸಳ ಶೈಲಿಯ ನಕ್ಷತ್ರಾಕಾರದ ಅಡಿಪಾಯ ಈ ದೇವಾಲಯಕ್ಕಿದೆ. ೨ ದ್ವಾರಗಳಿರುವ ಈ ದೇವಸ್ಥಾನದ ಪ್ರಮುಖ ದ್ವಾರ ಯಾವುದೆಂದು ತಿಳಿದುಕೊಳ್ಳುವುದೇ ಸಮಸ್ಯೆ. ನಂತರ ನಂದಿ ಇದ್ದ ದ್ವಾರವೇ ಪ್ರಮುಖ ದ್ವಾರ ಎಂದು ತಿಳಿದುಬಂತು. ಇದೊಂದು ವಿಚಿತ್ರ ಶೈಲಿಯ ತ್ರಿಕೂಟಾಚಲ ದೇವಸ್ಥಾನ. ಎಲ್ಲಾ ತ್ರಿಕೂಟಾಚಲ ದೇವಸ್ಥಾನಗಳು ಆಂಗ್ಲ ಅಕ್ಷರಮಾಲಿಕೆಯ 'ವಿ' ಆಕಾರದಲ್ಲಿದ್ದರೆ, ಈ ದೇವಾಲಯ 'ಎಲ್' ಆಕಾರದಲ್ಲಿತ್ತು! ನಂದಿ ಮುಖ ಮಾಡಿ ನಿಂತಿರುವ ಪ್ರಮುಖ ಗರ್ಭಗುಡಿಯಲ್ಲಿ ಶಿವಲಿಂಗವಿದೆ. ಇದರ ಬಲಕ್ಕೆ ತ್ರಿಕೂಟಾಚಲ ಶೈಲಿಗೆ ತಕ್ಕಂತೆ ಇರುವ ಗರ್ಭಗುಡಿಯಲ್ಲಿ ವಿಷ್ಣುವಿನ ವಿಗ್ರಹವಿದೆ. ತ್ರಿಕೂಟಾಚಲ ರಚನೆಯಂತೆ ಪ್ರಮುಖ ಗರ್ಭಗುಡಿಯನ್ನು ಹೊರತುಪಡಿಸಿ ಉಳಿದೆರಡು ಗರ್ಭಗುಡಿಗಳು ಎದುರುಬದುರಾಗಿರಬೇಕು. ‪@malnadrovers‬ #Malnadrovers
  • Розваги

КОМЕНТАРІ • 2

  • @sathishraj3568
    @sathishraj3568 6 місяців тому +1

    Namma puraatana devastanavannu namege tilisiddakke nimage dhanyavada malnad rovers.

  • @nagarajbirNagarajbir
    @nagarajbirNagarajbir 6 місяців тому +1

    Super temple and visiting place.... ❤️🥳💫☺️