Adultery Is Not A Crime | Supreme Court Declares Section 497 As Unconstitutional
Вставка
- Опубліковано 28 жов 2024
- ಕಾನೂನಿನ ಮುಂದೆ ಗಂಡು-ಹೆಣ್ಣು ಎಂಬ ಬೇಧವಿಲ್ಲ. ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿರುವುದು ಅಪರಾಧವಲ್ಲ ಅಂತ ಸುಪ್ರೀಂ ಕೋರ್ಟ್‍ನ ಸಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.
ಭಾರತೀಯ ದಂಡ ಸಹಿತೆಯ ಸೆಕ್ಷನ್ 497 ರ ಪ್ರಕಾರ ವಿವಾಹಿತ ಪುರುಷ ಅನೈತಿಕ ಸಂಬಂಧ ಹೊಂದಿದ್ದರೆ ಅಪರಾಧ ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅಪರಾಧ ಎಂದು ಹೇಳುವ ಈ ಸೆಕ್ಷನ್ ಅಸಂವಿಧಾನಿಕ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ರೊಹಿನ್‍ಟನ್ ಫಾಲಿ ನಾರಿಮನ್, ಎ ಎಂ ಖಾನ್‍ವಿಲ್ಕರ್, ಡಿ ವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರ ಅವರನ್ನು ಒಳಗೊಂಡ ಈ ಪೀಠ ಈ ಆದೇಶವನ್ನು ಪ್ರಕಟಿಸಿದೆ. ಹಲವು ದೇಶಗಳು ವ್ಯಭಿಚಾರವನ್ನು ನಿಷೇಧಿಸಿದೆ. ಪ್ರತಿಯೊಬ್ಬ ವ್ಯಕ್ತಿಗೂ ವೈಯಕ್ತಿಕ ಜೀವನ ಇರುತ್ತದೆ. ಗಂಡ ಹೆಂಡತಿಗೆ ಮಾಲೀಕನಲ್ಲ ಎಂದು ಹೇಳುವ ಮೂಲಕ ಸಮಾನತೆಯನ್ನು ಪೀಠ ಸಾರಿದೆ.
ಸಂವಿಧಾನದ 14ನೇ ವಿಧಿಯ ನೆಲೆಯಲ್ಲಿ (ಕಾನೂನಿನ ಮುಂದೆ ಎಲ್ಲರೂ ಸಮಾನರು) ಐಪಿಸಿಯ ಸೆಕ್ಷನ್ 497 ಕ್ರಿಮಿನಲ್ ಅಪರಾಧವಾಗಿ ಉಳಿಯಲು ಸಾಧ್ಯವಿಲ್ಲ. ಗಂಡು-ಹೆಣ್ಣು ಎಂಬ ಬೇಧವಿಲ್ಲ. ಎಲ್ಲರೂ ಸಂವಿಧಾನದ ಮುಂದೆ ಸಮಾನರು ಎಂದು ಹೇಳಿದೆ.
Keep Watching Us On UA-cam At: / publictvnewskannada
Watch More From This Playlist Here: / publictvnewskannada
Read detailed news at www.publictv.in
Subscribe on UA-cam: www.youtube.co...
Follow us on Google+ @ plus.google.co...
Like us @ / publictv
Follow us on twitter @ / publictvnews
--------------------------------------------------------------------------------------------------------
Public TV brings to you the latest updates from all walks of life, be it politics or entertainment, religion or sports, crime or any other thing. Keep watching...