Mavu Mela 2024 ಪ್ರಪಂಚದ ಅತ್ಯಂತ ದುಬಾರಿ ಮಾವಿನ ಪ್ರದರ್ಶನ Miya Jacky Koppal

Поділитися
Вставка
  • Опубліковано 12 тра 2024
  • ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಮೇ 13ರಿಂದ ಮೇ 21ರ ವರೆಗೆ ಕೊಪ್ಪಳ ನಗರದ ಎಲ್.ಐ.ಸಿ ಆಫೀಸ್ ಹತ್ತಿರವಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಚಾಲನೆ ರಿಬ್ಬನ್ ಕತ್ತರಿಸುವುದರ ಮೂಲಕ ಸೋಮವಾರ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ.ಉಕ್ಕುಂದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ್) ವತಿಯಿಂದ 8ನೇ ವರ್ಷದ ಮಾವು ಮೇಳವನ್ನು ಮೇ 13 ರಿಂದ ಮೇ 21ರ ವರೆಗೆ ತೋಟಗಾರಿಕೆ ಇಲಾಖೆ (ಜಿಪಂ) ಕೊಪ್ಪಳ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ 5000 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ಮಾವಿನ ಹಣ್ಣಿನ ಬೆಳೆಗಳನ್ನು ಬೆಳೆಯುತ್ತಿದ್ದು, ಇವುಗಳಲ್ಲಿ ಮುಖ್ಯವಾಗಿ ಕೇಸರ್ ತಳಿಯು ಅತ್ಯಂತ ಬೇಡಿಕೆಯ ತಳಿಯಾಗಿದೆ ಹಾಗೂ ದಶಹರಿ, ತೋತಾಪೂರಿ, ಮಲ್ಲಿಕಾ, ಬೆನೆಶಾನ್, ಸಿಂಧೂರಿ, ಇಮಾಮ ಪಸಂದ, ಉಪ್ಪಿನಕಾಯಿ ತಳಿಗಳನ್ನು ಬೆಳೆಯತ್ತಿದ್ದು ರೈತರ ಅನುಕೂಲಕ್ಕಾಗಿ ಹಾಗೂ ಗ್ರಾಹಕರಿಗೆ ಯೋಗ್ಯ ಬೆಲೆಗೆ ಗುಣಮಟ್ಟದ ಹಣ್ಣುಗಳನ್ನು ಮಾರಾಟ ಮಾಡಲು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ಈ ಮೇಳವನ್ನು ಆಯೋಜಿಸಲಾಗಿದೆ.
    mavumela_koppal_horticulure_krishna_ukkund

КОМЕНТАРІ •