ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಉಣ್ಣಕ್ಕಿ ಉತ್ಸವದಲ್ಲಿ ಅಲುಗಾಡಿದ ಹುತ್ತ | Chikkamagaluru | Vijay Karnataka
Вставка
- Опубліковано 3 лис 2024
- ಈ ಹುತ್ತಕ್ಕೆ ಸೂರಿಲ್ಲ. ತಡೆಗೋಡೆಗಳೂ ಇಲ್ಲ. ಆದರೂ ಮಳೆ, ಗಾಳಿಗೆ ಒಂದಿಂಚು ಕರಗಿಲ್ಲ. ಹುತ್ತದ ಸುತ್ತಲೂ ಕಲ್ಲು, ಸಿಮೆಂಟ್‍ಗಳಿಂದ ಬಂದೋಬಸ್ತ್ ಮಾಡಿದ್ರು ಕೂಡ ದೀಪಾವಳಿ ಅಮಾವಸ್ಯೆಯ ನಂತರದ ಮಕ್ಕಳ ಹುಣ್ಣೆಮೆಯ ದಿನ ಮಹಾ ಮಂಗಳಾರತಿ ವೇಳೆ ಇಲ್ಲಿ ನಡೆಯೋ ವಿಚಿತ್ರವನ್ನು ಕಂಡರೇ ಎಂತಹ ನಾಸ್ತಿಕರೂ ಕೂಡ ಆಸ್ತಿಕರಾಗದೇ ಇರರು.
ದನ ಕಾಯೋ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಯ್ತು. ಹೊಯ್ಸಳರ ಕಾಲದಿಂದಲೂ ನಡೆದು ಬರ್ತಿರೋ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಸ್ಯೆ ನಂತರದ ಮಕ್ಕಳ ಹುಣ್ಣೆಮೆಯಂದು ನಡೆಯುವ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತಾ 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತೆ.
ಹೌದು, ಇದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಉಣ್ಣಕ್ಕಿ ಉತ್ಸವ. ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನ ಮೂಕವಿಸ್ಮಿತರನ್ನಾಗಿಸುತ್ತೆ. ಈ ಪವಾಡವನ್ನ ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಬರ್ತಿದ್ದಾರೆ.
#Chikkamagaluru #Devotees #Snake
Our Website : Vijaykarnataka...
Facebook: / vijaykarnataka
Twitter: / vijaykarnataka