Tolu Tolu Tolu Ranga Kondapur Krishna Matha Hyderabad ll Raghavendra Swamy Aradhane ll Kolata Seve

Поділитися
Вставка
  • Опубліковано 3 вер 2023
  • Tholu Tholu Tholu Ranga
    ತೋಳು ತೋಳು ತೋಳು ರಂಗ
    ತೋಳು ತೋಳು ತೋಳು ರಂಗ ತೋಳನ್ನಾಡೈ ಸ್ವಾಮಿ |
    ನೀಲವರ್ಣದ ಬಾಲಕೃಷ್ಣನೆ ತೋಳನ್ನಾಡೈ ||ಪ||
    ಹುಲಿಯುಗುರರಳೆಲೆ ಮಾಗಾಯಿಗಳನಿಟ್ಟ ತೋಳನ್ನಾಡೈ ಸ್ವಾಮಿ |
    ಘಲಿರೆಂಬಂದುಗೆ ಗೆಜ್ಜೆಲಿ ನಲಿವುತ್ತ ತೋಳನ್ನಾಡೈ |
    ನೆಲುವಿಗೆ ನಿಲುಕದೆ ಒರಳ ತಂದಿಟ್ಟ ತೋಳನ್ನಾಡೈ ಸ್ವಾಮಿ |
    ಚೆಲುವ ಮಕ್ಕಳ ಮುದ್ದು ಮಾಣಿಕವೆ ತೋಳನ್ನಾಡೈ ||
    ಮಾತೆಯ ಪಿತನ ಅಣುಗನ ಮಡುಹಿದ ತೋಳನ್ನಾಡೈ|
    ಪೂತನಿಯೆಂಬವಳಸುವನೆ ಹೀರಿದ ತೋಳನ್ನಾಡೈ ಸ್ವಾಮಿ |
    ಮಾತಿಗೆ ಶಿಶುಪಾಲನ ಶಿರತರಿದ ತೋಳನ್ನಾಡೈ ಸ್ವಾಮಿ |
    ಶ್ರೀ ತುಲಸಿಯ ಪ್ರಿಯ ನಿತ್ಯವಿನೋದಿ ತೋಳನ್ನಾಡೈ ||
    ದಟ್ಟಡಿಯಿಡುತಲೆ ಬೆಣ್ಣೆಯ ಮೆಲುವ ತೋಳನ್ನಾಡೈ ಸ್ವಾಮಿ |
    ಕಟ್ಟಿದ ಕರಡಿಯ ಕರುವೆಂದೆಳೆದ ತೋಳನ್ನಾಡೈ |
    ಬಟ್ಟಲ ಹಾಲ ಒಲ್ಲೆಂದು ಕಾಡಿದ ತೋಳನ್ನಾಡೈ ಸ್ವಾಮಿ |
    ಬಟ್ಟಲೊಳುಣವಿಸೆ ನಗುವಾತನೆ ತೋಳನ್ನಾಡೈ ||
    ಸಜ್ಜನ ಸತ್ಯಕೆ ಧರ್ಮವ ನಡೆಸಿದ ತೋಳನ್ನಾಡೈ ಸ್ವಾಮಿ |
    ಅರ್ಜುನ ರಥಕೆ ಸಾರಥ್ಯ ಮಾಡಿದ ತೋಳನ್ನಾಡೈ |
    ಲಜ್ಜೆಗೀಡಾದ ದ್ರೌಪದಿ ಕಾಯ್ದ ತೋಳನ್ನಾಡೈ ಸ್ವಾಮಿ |
    ವಜ್ರಪಂಜರ ಪಾಂಡವಪ್ರಿಯ ತೋಳನ್ನಾಡೈ ||
    ನಖದಿಂದ ಹಿರಣ್ಯಕನುದರ ಬಗಿದ ತೋಳನ್ನಾಡೈ ಸ್ವಾಮಿ |
    ಸುಖದಿಂದಲಿ ಪ್ರಹ್ಲಾದನ ಕಾಯ್ದ ತೋಳನ್ನಾಡೈ |
    ವಿಖಳಿತಗೆಡಿಸಿದ ಗೋಪಸ್ತ್ರೀಯರ ತೋಳನ್ನಾಡೈ |
    ಸ್ವಾಮಿ ಸುಖತೀರ್ಥರ ಪತಿ ಪುರಂದರವಿಠಲ ತೋಳನ್ನಾಡೈ ||
    Purandara Dasa, also known as Purandara Vittala, is one of the most revered saints and classical composers in the history of Carnatic music. He lived during the 15th and 16th centuries in present-day Karnataka, India. Here is a description of Purandara Dasa
    Purandara Dasa's compositions, characterized by their simplicity and devotion, continue to be sung and revered by musicians and music enthusiasts in the Carnatic tradition.
    This composition reflects the devotional and poetic nature of Purandara Dasa's works, expressing love and reverence for Lord Krishna. If you have more specific questions or if there's anything else you'd like to know about this composition or Purandara Dasa's works, feel free to ask!

КОМЕНТАРІ • 87