ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ, |
Вставка
- Опубліковано 8 лют 2025
- •ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ
ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗೋದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು.
ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು. ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು.
ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು.
ಪೂಜೆಯ ನಂತರ ಹತ್ತುದಿನಗಳ ವರೇಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ.
"ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್"
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ತುಮಕೂರು ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.
Don't forget to like comment share & subscribe....
•Follow me on --
Instagram ---
/ dreamguru_kannada
•Facebook ---
www.facebook.c...
•creadit -
alubm- the Mumbai beat
artist - Hanu Dixit
link_
• The Mumbai Beat
•Audio
Sukh Karta Dukh Harta by Various Artist
Content owner
Music Nova
Thanks for watching ❤️. -----------------------------++++-----
•TAGS
#dreamgurukannada #dreamguru Kannadaflying #tumkur #tumkurvlog
#travelvlog #hindumahaganapathi #explore
#ganeshchaturthi #ganeshvisarjan
#dreamgurukannadaflying
#travel #temple #hindumahaganapathi tumkur 2023
#train #Hindu maha ganapathi tumkur
#ganpatibappastatus #ganeshutsav
#travelvlogkannada
#ganeshchaturthitumkuru2023
#live #tumku #gane
#today #travel
#kannadatravelvlogs
#kannadatravelvlog
#kannadatraveller
#trending #dreamguru
#kannada #ganesh
#karnataka #mgroad
#durga #chitrudurga