ಕಗ್ಗಾಮೃತ 53 - ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ? | Kaggamrutha | Mankuthimmana Kagga

Поділитися
Вставка
  • Опубліковано 21 сер 2024
  • ಕಗ್ಗಾಮೃತ
    ಕಗ್ಗ - 53
    ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ? ।
    ದಿನಪನದೆ? ಚಂದ್ರನದೆ? ನೀರಿನದೆ? ನಿನದೆ? ॥
    ತಣಿತಣಿವ ನಿನ್ನ ಕಣ್ಣಿನ ಪುಣ್ಯವೋ? ನೋಡು ।
    ಗುಣಕೆ ಕಾರಣವೊಂದೆ? - ಮಂಕುತಿಮ್ಮ ॥ ೫೩ ॥
    ಭಾವಾರ್ಥ:
    ಹೌದಲ್ಲವಾ? ನಮಗೂ ಇಂತಹ ಪ್ರಶ್ನೆಗಳು ಮನದಲ್ಲಿ ಉದ್ಭವವಾಗಿರಬಹುದು, ಹಲವು ಬಾರಿ. ನಾವು ನೋಡುವ ಪ್ರತಿವಸ್ತುವಿನಲ್ಲೂ ಹಲವು ಸೋಜಿಗಗಳನ್ನು ನಾವು ಕಾಣಬಹುದು. ಆದರೆ ಆ ಸೋಜಿಗಕ್ಕೆ ಒಂದು ಕಾರಣವನ್ನು ಹುಡುಕಲು ನಮ್ಮಿಂದಾಗುವುದಿಲ್ಲ. ಏಕೆಂದರೆ ಒಂದು ಕಾರಣದಿಂದ ಆದಂತ ವಸ್ತುವಾವುದೂ ಈ ಪ್ರಪಂಚದಲ್ಲಿ ಇಲ್ಲವೆಂಬುದೆ ನನ್ನ ಗಟ್ಟಿ ನಂಬಿಕೆ. ಹಾರುವ ಹಕ್ಕಿಯ ಬಣ್ಣ, ರೆಕ್ಕೆಯ ವಿನ್ಯಾಸ, ಹಾವಿನ ರೂಪ, ಅದರ ಮೈಮೇಲಿನ ಚಿತ್ತಾರಗಳು, ಅಬ್ಬಾ ಎಂತಹ ವಿಚಿತ್ರ. ಇದೊಂದೂ ನಮಗೆ ಅರ್ಥವಾಗುವುದಿಲ್ಲ. ಎಲ್ಲವೂ ವಿಸ್ಮಯ.

КОМЕНТАРІ • 1